
ಕಾವೇರಿ ನದಿ ನೀರಿನ ಹಂಚಿಕೆ ವಿವಾದ ಬಗೆಹರಿಸಲು ಕೇಂದ್ರ ಸರ್ಕಾರ ಅಥವಾ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯಲ್ಲಿ ಶಾಶ್ವತ ಸಂಕಷ್ಟ ಪರಿಹಾರ ಸೂತ್ರ ರೂಪಿಸಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಪ್ರಸ್ತುತ ಕೆಆರ್ ಎಸ್ ಅಣೆಕಟ್ಟೆಯಲ್ಲಿ 19 ಟಿಎಂಸಿ ನೀರಿದ್ದು, ಕುಡಿಯುವ ನೀರಿನ ಅಗತ್ಯಕ್ಕಾಗಿ ರಾಜ್ಯಕ್ಕೆ 39 ಟಿಎಂಸಿ ನೀರು ಬೇಕಾಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಗಿದೆ.
ಕಳೆದ 76 ವರ್ಷಗಳಲ್ಲಿ ಕಾವೇರಿ ವಿಚಾರವಾಗಿ 25 ಬಾರಿ ಸಭೆಗಳು ನಡೆದಿವೆ, ಆದರೆ ಈಗಿನ ಮಳೆ ಕೊರತೆಯ ಹಿನ್ನೆಲೆಯಲ್ಲಿ ರೈತರ ಬೆಳೆಗಳಿಗೆ ಕೂಡಲೇ ನೀರು ಒದಗಿಸುವುದು ಸರ್ಕಾರದ ಆದ್ಯತೆಯಾಗಬೇಕು ಎಂದು ತಿಳಿಸಿದ್ದಾರೆ.