
ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ 'ಇಂಡಿ' ಮೈತ್ರಿಕೂಟದ ರ್ಯಾಲಿಯ ಜನಸಂದಣಿಯನ್ನು ತೋರಿಸಲು ಕಾಂಗ್ರೆಸ್ ನಾಯಕರು ಕೃತಕ ಬುದ್ಧಿಮತ್ತೆ (AI) ಬಳಸಿ ನಕಲಿ ಫೋಟೋ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಕೇಂದ್ರ ಸಚಿವ ಕಿರಣ್ ರಿಜಿಜು ಸೇರಿದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೈದಾನದ ಶೇ. 40ರಷ್ಟು ಭಾಗ ಖಾಲಿ ಇತ್ತು ಎಂದು ಟೀಕಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರೋಧಿಸಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಈ ಪ್ರತಿಭಟನಾ ರ್ಯಾಲಿ ಆಯೋಜಿಸಲಾಗಿತ್ತು.