
ಸಾರ್ವಜನಿಕ ಆರೋಗ್ಯ ರಕ್ಷಣೆಗಾಗಿ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ಮಾರಾಟ ಮತ್ತು ವಿತರಣೆಯನ್ನು ರಾಜ್ಯ ಸರ್ಕಾರ ಒಂದು ವರ್ಷದ ಅವಧಿಗೆ ನಿಷೇಧಿಸಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಅಡಿಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದ್ದು, 2026ರ ಆಗಸ್ಟ್ 10ರಿಂದಲೇ ರಾಜ್ಯಾದ್ಯಂತ ಈ ನಿಷೇಧ ಜಾರಿಗೆ ಬಂದಿದೆ.
ನಿಯಮ ಉಲ್ಲಂಘಿಸಿ ಉತ್ಪನ್ನಗಳನ್ನು ತಯಾರಿಸುವ ಅಥವಾ ಮಾರಾಟ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಎಚ್ಚರಿಸಿದೆ.