
ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ನಿರ್ಧಾರದ ವೇಳೆ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾಗ, ಗದಗ ಜಿಲ್ಲೆಯ ಲಕ್ಷ್ಮೇಶ್ವರಕ್ಕೆ ತೆರಳಿ ಶ್ರೀಗಳ ಪಾದಕ್ಕೆ ಬಿದ್ದು ಕ್ಷಮೆ ಕೇಳಿದ್ದಾಗಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ರಂಭಾಪುರಿ ಶ್ರೀಗಳ ಇಷ್ಟಲಿಂಗ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟೀಕೆಗಳು ಸಾಯುತ್ತವೆ ಆದರೆ ಸಾಧನೆಗಳು ಶಾಶ್ವತವಾಗಿ ಉಳಿಯುತ್ತವೆ ಎಂದು ಹೇಳಿದ್ದಾರೆ.
ವಿಪಕ್ಷಗಳು ದಿನನಿತ್ಯ ಮಾಡುವ ಟೀಕೆಗಳಿಗೆ ತಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾರ್ಮಿಕವಾಗಿ ನುಡಿದಿದ್ದಾರೆ.