
ಟೀಮ್ ಇಂಡಿಯಾ ಕ್ರಿಕೆಟರ್ ರಿಷಭ್ ಪಂತ್ ತಮ್ಮ ತವರು ರಾಜ್ಯ ಉತ್ತರಾಖಂಡದಲ್ಲಿ ಮನೆ ನಿರ್ಮಿಸಲು ಜಾಗ ಖರೀದಿಸಲು ಸಹಾಯ ಕೋರಿ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಮನವಿ ಮಾಡಿದ್ದಾರೆ.
ಕಳೆದ 3 ವರ್ಷಗಳಿಂದ ಜಾಗ ಹುಡುಕುತ್ತಿದ್ದರೂ ನಿಯಮಗಳ ಕಾರಣದಿಂದ ಸಾಧ್ಯವಾಗಿಲ್ಲ ಎಂದು ತಿಳಿಸಿರುವ 28 ವರ್ಷದ ಪಂತ್, ಸರ್ಕಾರಿ ದರದಲ್ಲೇ ಜಾಗ ಖರೀದಿಸಲು ಸಿದ್ಧವಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಪಂತ್ ಅವರ ಮನವಿಗೆ ಸ್ಪಂದಿಸಿದ ಸಿಎಂ ಧಾಮಿ, ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಿದ್ದು, ಸರ್ಕಾರದ ನಿಯಮಗಳ ಪ್ರಕಾರ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.