
ಬೆಳಗಾವಿಯ ಲೆಲೆ ಮೈದಾನದಲ್ಲಿ ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಏಕವಲಯ ಅಂತರ್ ಕಾಲೇಜು ಮಹಿಳಾ ಹಾಕಿ ಟೂರ್ನಿಯಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಗಳಿಸಿದೆ.
ಬಿ.ಪಿ.ಇಡಿ ಕಾಲೇಜು ಹಾಗೂ ಎಂ.ಪಿ.ಇಡಿ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿನಿಯರ ಈ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಚಾಂಪಿಯನ್‌ಷಿಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.
ತಂಡದ ನಾಯಕಿ ಭಾವನಾ ಖಿಲಾರ್ಗಿ ಸೇರಿದಂತೆ ಆಟಗಾರ್ತಿಯರ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಪ್ರಾಚಾರ್ಯರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.