
ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯ ಪಾಳುಬಿದ್ದ ಮನೆಯಲ್ಲಿ ಡಾಲ್ಡಾ, ವನಸ್ಪತಿ ಮತ್ತು ಪಾಮ್ ಆಯಿಲ್ ಬಳಸಿ ನಕಲಿ ನಾಟಿ ತುಪ್ಪ ತಯಾರಿಸುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಬಳ್ಳಾರಿಯಿಂದ ಬಂದಿದ್ದ ತಂಡವು ಕಳೆದ ಹಲವು ವರ್ಷಗಳಿಂದ ಈ ಕಲಬೆರಕೆ ದಂಧೆ ನಡೆಸುತ್ತಿದ್ದು, ದಾಳಿ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಆಹಾರ ಇಲಾಖೆ ಮತ್ತು ಪೊಲೀಸರು ಜಂಟಿಯಾಗಿ ದಾಳಿ ನಡೆಸಿ ರಾಸಾಯನಿಕಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.