
ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನದ ಅಕ್ರಮ ಸಾಗಾಣಿಕೆ ಪ್ರಕರಣದಲ್ಲಿ ನಟಿ ರನ್ಯಾ ರಾವ್‌ಗೆ ಕಸ್ಟಮ್ಸ್ ಇಲಾಖೆ 89 ಕೋಟಿ ರೂಪಾಯಿ ದಂಡ ವಿಧಿಸಿದೆ.
ಮಾರ್ಚ್ 7, 2024 ರಿಂದ ಫೆಬ್ರವರಿ 18, 2025 ರವರೆಗಿನ ಅವಧಿಯಲ್ಲಿ ದುಬೈನಿಂದ ಸುಮಾರು 113 ಕೆಜಿ ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ಸಾಗಾಟ ಮಾಡಿರುವುದು ತನಿಖೆಯಲ್ಲಿ ಸಾಬೀತಾಗಿದೆ.
2025ರ ಮಾರ್ಚ್ 3ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ಅಧಿಕಾರಿಗಳು ಅವರ ಬಳಿ 14.213 ಕೆಜಿ ಅಕ್ರಮ ಚಿನ್ನವನ್ನು ವಶಪಡಿಸಿಕೊಂಡಿದ್ದರು.