
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ.
ಮುಂದಿನ ನಾಲ್ಕೈದು ದಿನಗಳವರೆಗೆ ಕರ್ನಾಟಕ ಮತ್ತು ದೇಶದ ಇತರ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಡಿಶಾ, ಛತ್ತೀಸ್ಗಢ, ತೆಲಂಗಾಣ, ಜಾರ್ಖಂಡ್, ಪಶ್ಚಿಮ ಬಂಗಾಳ, ಮಧ್ಯಪ್ರದೇಶ ಮತ್ತು ವಿದರ್ಭದ ಕೆಲವು ಭಾಗಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುವ ನಿರೀಕ್ಷೆಯಿದೆ.