
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಹುಬ್ಬಳ್ಳಿ ಗ್ರಾಮಾಂತರ ವಿಭಾಗದಲ್ಲಿ ಬಸ್ ಡಿಪೋ ಹಾಗೂ ವರ್ಕ್‌ಶಾಪ್‌ಗಳಲ್ಲಿ ಗಣೇಶ ಚತುರ್ಥಿಯ ಪ್ರಸಾದ ತಯಾರಿಗೆ ನಿಷೇಧ ಹೇರಿ ಜಾಗೃತಾ ಶಾಖೆಯಿಂದ ನೂತನ ಸುತ್ತೋಲೆ ಹೊರಡಿಸಲಾಗಿದೆ.
ಡೀಸೆಲ್ ಟ್ಯಾಂಕ್ ಹಾಗೂ ಸುಲಭವಾಗಿ ಬೆಂಕಿ ಹೊತ್ತಿಕೊಳ್ಳುವ ಸಾಮಗ್ರಿಗಳು ಇರುವ ಕಾರಣ ಅಗ್ನಿ ಸುರಕ್ಷತಾ ಕ್ರಮವಾಗಿ ಕಟ್ಟಿಗೆ ಅಥವಾ ಗ್ಯಾಸ್ ಬಳಸಿ ಅಡುಗೆ ಮಾಡುವುದನ್ನು ಸಂಪೂರ್ಣವಾಗಿ ತಡೆಯಲು ಈ ಆದೇಶ ನೀಡಲಾಗಿದೆ.
ಹಲವು ವರ್ಷಗಳಿಂದ ನಡೆದುಕೊಂಡು ಬಂದಿದ್ದ ಸಾಂಪ್ರದಾಯಿಕ ಆಚರಣೆಗೆ ದಿಢೀರ್ ನಿಷೇಧ ಹೇರಿರುವುದಕ್ಕೆ ನೌಕರರು ಹಾಗೂ ಸಿಬ್ಬಂದಿ ವರ್ಗದಿಂದ ತೀವ್ರ ಅಸಮಾಧಾನ ಹಾಗೂ ಆಕ್ಷೇಪ ವ್ಯಕ್ತವಾಗಿದೆ.