
ರಾಯಚೂರು ತಾಲೂಕಿನ ಬಿಚ್ಚಾಲಿ ಕ್ಯಾಂಪ್‌ನಲ್ಲಿ ದೇವಸ್ಥಾನದ ಜಾಗದಲ್ಲಿ ಚರ್ಚ್ ನಿರ್ಮಿಸಲಾಗಿದೆ ಎಂಬ ಆರೋಪದಿಂದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಇಬ್ಬರಿಗೆ ಗಾಯವಾಗಿದೆ.
ಸರ್ಕಾರ 2009ರ ಪ್ರವಾಹ ಸಂತ್ರಸ್ತರಿಗಾಗಿ ಮೀಸಲಿಟ್ಟಿದ್ದ ಸರ್ವೇ ನಂಬರ್ 322ರ ಜಾಗದಲ್ಲಿ 2024ರಲ್ಲಿ ಚರ್ಚ್ ನಿರ್ಮಿಸಲಾಗಿದೆ ಎಂದು ಒಂದು ಗುಂಪು ಆರೋಪಿಸಿದೆ.
ಘಟನೆಯ ನಂತರ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ವಿವಾದಿತ ಸ್ಥಳದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.