
ಬೆಂಗಳೂರಿನ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದ ರಕ್ಷಣಾ ಇಲಾಖೆಯ ಭೂಮಿ ಹಾಗೂ ಅನುಮತಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವಂತೆ ಸಿಎಂ ಡಿ.ಕೆ. ಶಿವಕುಮಾರ್ ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ.
ಇಬ್ಬಲೂರು ಫೈರಿಂಗ್ ರೇಂಜ್ ಬಳಿ 730 ಎಕರೆ ಜಾಗದಲ್ಲಿ ಉದ್ಯಾನವನ ನಿರ್ಮಾಣ ಹಾಗೂ ವಿಮಾನ ನಿಲ್ದಾಣಗಳ 20 ಕಿ.ಮೀ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ನಿಯಮ ಸಡಿಲಿಸುವಂತೆ ಏಳು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
ಉತ್ತರ ಬೆಂಗಳೂರಿನ ಸುರಂಗ ಮಾರ್ಗ ಯೋಜನೆಗೆ ಸಂಬಂಧಿಸಿದ 2.039 ಎಕರೆ ರಕ್ಷಣಾ ಜಮೀನಿನ ಲೈಸೆನ್ಸ್ ಶುಲ್ಕವನ್ನು ಜಮೀನು ಬೆಲೆಯ ಶೇ.33ರ ಬದಲಿಗೆ ಶೇ.2ಕ್ಕೆ ಇಳಿಸುವಂತೆ ಕೋರಿದ್ದಾರೆ.