
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪ್ರಥಮ ದರ್ಜೆ ಸಹಾಯಕ (FDA) ಮತ್ತು ದ್ವಿತೀಯ ದರ್ಜೆ ಸಹಾಯಕ (SDA) ಸೇರಿದಂತೆ 33 ವಿವಿಧ ಇಲಾಖೆಗಳ ಒಟ್ಟು 5,431 ಸಮಾನಾಂತರ ಹುದ್ದೆಗಳಿಗೆ ಒಂದೇ ನೇಮಕಾತಿ ಪರೀಕ್ಷೆಯ ವ್ಯವಸ್ಥೆಯನ್ನು ಜಾರಿಗೆ ತಂದಿದೆ.
ಶುಕ್ರವಾರದಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳು ಒಂದೇ ಅರ್ಜಿ ಮತ್ತು ಒಂದೇ ಶುಲ್ಕದ ಮೂಲಕ ಎಲ್ಲಾ ಇಲಾಖೆಗಳ ಹುದ್ದೆಗಳಿಗೆ ಸ್ಪರ್ಧಿಸಬಹುದಾಗಿದ್ದು, ಸಿಇಟಿ ಮಾದರಿಯಲ್ಲಿ ಕೌನ್ಸೆಲಿಂಗ್ ನಡೆಸಿ ಹುದ್ದೆ ಹಂಚಿಕೆ ಮಾಡಲಾಗುತ್ತದೆ.
ಈ ಹಿಂದೆ ಕೆಇಎ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ಹಳೆಯ ಲಾಗಿನ್ ವಿವರಗಳನ್ನು ಬಳಸಿ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಮುಂದಿನ ದಿನಗಳಲ್ಲಿ ವರ್ಷಕ್ಕೆ ಎರಡು ಬಾರಿ ಪರೀಕ್ಷೆ ನಡೆಸಲು ಚಿಂತಿಸಲಾಗಿದೆ.