
ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಅಕ್ಟೋಬರ್ 28ರ ವರೆಗೆ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರದ ಮೇಲಿನ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪರಿಚಲನೆ ವ್ಯವಸ್ಥೆಗಳು ಮಳೆಗೆ ಪ್ರಮುಖ ಕಾರಣವಾಗಿವೆ ಎಂದು ಐಎಂಡಿ ತಿಳಿಸಿದೆ.
ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಕರ್ನಾಟಕದ 5 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.