
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಂಪೂರ್ಣವಾಗಿ ನಿರ್ಗಮನದ ಹಂತದಲ್ಲಿದ್ದು, ಇನ್ನೆರಡು-ಮೂರು ದಿನಗಳಲ್ಲಿ ಈಶಾನ್ಯ ಮುಂಗಾರು ಪ್ರವೇಶಿಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಹಾಗೂ ಗುಡುಗು-ಸಿಡಿಲು ಸಹಿತ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಅಕ್ಟೋಬರ್ 15 ರಿಂದ 18ರವರೆಗೆ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.