
ಕರ್ನಾಟಕದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಸುಮಾರು 700ರ ಸಮೀಪ ತಲುಪಿದೆ ಎಂದು ಅರಣ್ಯ ಇಲಾಖೆ ಅಂದಾಜಿಸಿದೆ.
2022ರ ಅಖಿಲ ಭಾರತ ಹುಲಿ ಗಣತಿ ವರದಿಯಲ್ಲಿ ರಾಜ್ಯದಲ್ಲಿ 563 ಹುಲಿಗಳು ದಾಖಲಾಗಿದ್ದವು ಎಂದು ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.
ಹುಲಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಸಂತಸದ ವಿಷಯವಾಗಿದ್ದರೂ, 2025-26ನೇ ಸಾಲಿನಲ್ಲಿ ಮಾನವ-ವನ್ಯಜೀವಿ ಸಂಘರ್ಷದಿಂದ 51 ಮಂದಿ ಮೃತಪಟ್ಟಿರುವುದು ಆತಂಕ ತಂದಿದೆ.