
ಗುಜರಾತ್‌ನ ಏಕತಾ ನಗರದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, ‘ಮಿಥ್ಯ’ ಸಿನಿಮಾಗೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ, ‘ನಾನಿರುವುದೇ ನಿಮಗಾಗಿ, ನಾಡಿರುವುದು ನಮಗಾಗಿ’ ಪುಸ್ತಕಕ್ಕೆ ಅತ್ಯುತ್ತಮ ಪುಸ್ತಕ ಪ್ರಶಸ್ತಿ ಲಭಿಸಿದೆ.
‘ಮಿಥ್ಯಂ’ ಸಿನಿಮಾದ ನಟನೆಗೆ ಅತೀಶ್ ಎಸ್ ಶೆಟ್ಟಿ ಅತ್ಯುತ್ತಮ ಬಾಲನಟ ಪ್ರಶಸ್ತಿ ಮತ್ತು ರೂಪಾಶ್ರೀ ವಾರ್ಕಡಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಸ್ವೀಕರಿಸಿದರು.