
ಚೀನಾದ ಹಾಂಗ್ಝೂನಲ್ಲಿ ನಡೆಯುತ್ತಿರುವ ಐಎಸ್ಎಸ್ಎಫ್ ಶೂಟಿಂಗ್ ವಿಶ್ವಕಪ್ನ ಮಹಿಳೆಯರ 25 ಮೀ. ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಇಶಾ ಸಿಂಗ್ ಸ್ವರ್ಣ ಪದಕ ಗೆದ್ದಿದ್ದಾರೆ.
ಫೈನಲ್ ಸುತ್ತಿನಲ್ಲಿ ಇಶಾ 40 ಅಂಕಗಳನ್ನು ಗಳಿಸಿದರೆ, ಒಲಿಂಪಿಯನ್ ಮನು ಭಾಕರ್ 28 ಅಂಕಗಳೊಂದಿಗೆ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.
ಒಟ್ಟು ಒಂದು ಚಿನ್ನ, ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕದೊಂದಿಗೆ ಭಾರತವು ಪದಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.