
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಮೈತ್ರಿಕೂಟದ ನಾಯಕರು ನಡೆಸಿದ ಪ್ರತಿಭಟನೆ ವೇಳೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆಕಾಶವಾಣಿ ಭವನದ ಬಳಿ ರಾತ್ರಿಯಿಡೀ ಧರಣಿ ನಡೆಸಲು ಅನುಮತಿ ಇಲ್ಲ ಎಂದು ಪೊಲೀಸರು ಮುನ್ನೆಚ್ಚರಿಕೆ ನೀಡಿದ್ದರೂ, ನಾಯಕರು ಬ್ಯಾರಿಕೇಡ್ ಏರಿ ಪ್ರತಿಭಟನೆ ಮುಂದುವರಿಸಿದರು.
ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಟಿಎಂಸಿಯ ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.