
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಮುಗಿಸಿರುವ ಟೀಮ್ ಇಂಡಿಯಾ, ಅಕ್ಟೋಬರ್ 6 ರಿಂದ ನವೆಂಬರ್ 1ರ ನಡುವೆ ಕೇವಲ 26 ದಿನಗಳಲ್ಲಿ 10 ಟಿ20 ಪಂದ್ಯಗಳನ್ನಾಡಲಿದೆ.
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯು ಅಕ್ಟೋಬರ್ 6 ರಂದು ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಆರಂಭವಾಗಿ ಅಕ್ಟೋಬರ್ 17 ರಂದು ಬೆಂಗಳೂರಿನಲ್ಲಿ ಮುಕ್ತಾಯಗೊಳ್ಳಲಿದೆ.
ಅದರ ಬೆನ್ನಲ್ಲೇ ಅಕ್ಟೋಬರ್ 22 ರಿಂದ ನವೆಂಬರ್ 1ರವರೆಗೆ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡ ಕಣಕ್ಕಿಳಿಯಲಿದೆ.