
ನಮ್ಮ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 13ರಂದು ಬೆಂಗಳೂರಿಗೆ ಆಗಮಿಸಿ ಮೆಟ್ರೋ ಗುಲಾಬಿ ಮಾರ್ಗವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ವತಿಯಿಂದ ಸಾಲ ಪಡೆದು ಮೆಟ್ರೋ ಅಭಿವೃದ್ಧಿಪಡಿಸಲಾಗುತ್ತಿದ್ದು, ಪ್ರಧಾನಿಯವರ ಭೇಟಿಯ ಸಂದರ್ಭದಲ್ಲಿ ಕೆಲವು ಪ್ರಮುಖ ವಿಚಾರಗಳನ್ನು ಅವರ ಮುಂದಿಡುವುದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಹಿರಿಯ ಸಾಹಿತಿ ಕೆ.ವಿ. ನಾರಾಯಣ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಅವರು, ಭಾಷಾಶಾಸ್ತ್ರಜ್ಞರಾಗಿ ಮತ್ತು ಹಂಪಿ ಕನ್ನಡ ವಿವಿ ಕಟ್ಟುವಲ್ಲಿ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು.