
2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷೆಯಾಗಿ ಆರಾಧನಾ ಮಿಶ್ರಾ ಅವರನ್ನು ನೇಮಿಸಲಾಗಿದೆ.
ಈ ಮೂಲಕ ರಾಜ್ಯದ ಪ್ರಭಾವಿ ಬ್ರಾಹ್ಮಣ ಸಮುದಾಯ ಮತ್ತು ಮಹಿಳಾ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಹೈಕಮಾಂಡ್ ಮಾಸ್ಟರ್ ಪ್ಲಾನ್ ರೂಪಿಸಿದೆ.
ಸಹಾರನ್ಪುರ ಸಂಸದ ಇಮ್ರಾನ್ ಮಸೂದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಹಾಗೂ ದೇವೇಂದ್ರ ನಿಷಾದ್ ಮತ್ತು ಅಲೋಕ್ ಪ್ರಸಾದ್ ಅವರನ್ನು ಹಿರಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.