
ವಿಜಯಪುರ ವಿಮಾನ ನಿಲ್ದಾಣದಲ್ಲಿ ಕಾರ್ವರ್ ಏವಿಯೇಷನ್ ಸಂಸ್ಥೆಯು ಸ್ಯಾಟಲೈಟ್ ಫ್ಲೈಯಿಂಗ್ ಟ್ರೈನಿಂಗ್ ಅಕಾಡೆಮಿಯನ್ನು ಸ್ಥಾಪಿಸಲು ಮುಂದಾಗಿದೆ.
ಈ ಯೋಜನೆಗಾಗಿ ವಿಮಾನ ನಿಲ್ದಾಣದ ಆವರಣದಲ್ಲಿ 2.5 ಎಕರೆ ಜಾಗವನ್ನು ಕಂಪನಿ ಕೋರಿದ್ದು, ಇಲ್ಲಿ ಪೈಲಟ್ ತರಬೇತಿ ಮತ್ತು ವಿಮಾನ ನಿರ್ವಹಣಾ ಸೌಲಭ್ಯಗಳು ಬರಲಿವೆ.
ಅಕಾಡೆಮಿ ಆರಂಭವಾದರೆ ಸ್ಥಳೀಯ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ರಿಯಾಯಿತಿ ಸಿಗಲಿದ್ದು, ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ನೂರಾರು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.