
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 4,635 ಪ್ರಥಮ ದರ್ಜೆ ಸಹಾಯಕ (FDA) ಹಾಗೂ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿ ಅಧಿಸೂಚನೆ ಪ್ರಕಟಿಸಲಿದೆ.
ಶಿಕ್ಷಕರ ಕ್ಷೇತ್ರದ ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಂಡ ತಕ್ಷಣವೇ ಆರಂಭವಾಗಲಿರುವ ಈ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ವಿಭಾಗಕ್ಕೆ 1,038 ಹುದ್ದೆಗಳು ಮೀಸಲಿವೆ.
ಹೊಸ ನಿಯಮದಂತೆ ಎಫ್‌ಡಿಎಗೆ ಪದವಿ ಹಾಗೂ ಎಸ್‌ಡಿಎಗೆ ಪಿಯುಸಿ ವಿದ್ಯಾರ್ಹತೆ ಕಡ್ಡಾಯಗೊಳಿಸಲಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನ ಅಳವಡಿಸಲಾಗಿದೆ.