
ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ತುಂಗಭದ್ರಾ, ಆಲಮಟ್ಟಿ, ಕೆಆರ್ಎಸ್, ಕಬಿನಿ ಮತ್ತು ಹೇಮಾವತಿ ಜಲಾಶಯಗಳಿಗೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡಿದೆ.
ತುಂಗಭದ್ರಾ ಜಲಾಶಯಕ್ಕೆ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ಒಂದೇ ದಿನದಲ್ಲಿ 9 ಟಿಎಂಸಿ ನೀರು ಸಂಗ್ರಹವಾಗಿ ಪ್ರಸ್ತುತ 59 ಟಿಎಂಸಿ ನೀರಿದೆ.
ಆಲಮಟ್ಟಿ ಜಲಾಶಯಕ್ಕೆ 1,45,675 ಕ್ಯೂಸೆಕ್ ಒಳಹರಿವು ಇದ್ದು, ಕಬಿನಿ ಜಲಾಶಯದಿಂದ 27,000 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.