
ಆಗಸ್ಟ್ 12ರಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬೆಳಗಾವಿ ಸೇರಿದಂತೆ 11 ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು ಮತ್ತು ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ 17 ಜಿಲ್ಲೆಗಳಲ್ಲೂ ಗಾಳಿ ಸಹಿತ ಮಳೆಯಾಗಲಿದ್ದು, ಮರ ಹಾಗೂ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ.