
ಧಾರವಾಡದ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ಅವರು ಮುಧೋಳ ಮೂಲದ ಪರಮೇಶ್ವರ ಅಂಗಡಿ ಎಂಬುವವರಿಂದ ಭೂಮಿಯ ಖರಾಬು ದಾಖಲೆ ಸರಿಪಡಿಸಲು ₹1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಮೊದಲ ಕಂತಿನ ರೂಪದಲ್ಲಿ ₹50 ಲಕ್ಷ ಹಣ ಸ್ವೀಕರಿಸುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ತಹಶೀಲ್ದಾರ್ ಅವರನ್ನು ರೆಡ್ ಹ್ಯಾಂಡಾಗಿ ಬಂಧಿಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಸಚ್ಚಿದಾನಂದ ಕುಚನೂರ್ ಅವರನ್ನು ವಶಕ್ಕೆ ಪಡೆದು ಮುಂದಿನ ತನಿಖೆ ನಡೆಸುತ್ತಿದ್ದಾರೆ.