
ಸೋಮವಾರ ನಡೆದ ದಿ ಹಂಡ್ರೆಡ್ ಟೂರ್ನಿಯ 29ನೇ ಪಂದ್ಯದಲ್ಲಿ ಸದರ್ನ್ ಬ್ರೇವ್ ತಂಡವು ಟ್ರೆಂಟ್ ರಾಕೆಟ್ಸ್ ವಿರುದ್ಧ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಮೊದಲು ಬ್ಯಾಟ್ ಮಾಡಿದ ಟ್ರೆಂಟ್ ರಾಕೆಟ್ಸ್ 158 ರನ್ ಗಳಿಸಿದ್ದರೆ, ಸದರ್ನ್ ಬ್ರೇವ್ ತಂಡವು ಟ್ರಿಸ್ಟಾನ್ ಸ್ಟಬ್ಸ್ ಅಜೇಯ 52 ಮತ್ತು ಮಾರ್ಕಸ್ ಸ್ಟೋಯ್ನಿಸ್ 46 ರನ್ ನೆರವಿನಿಂದ 97 ಎಸೆತಗಳಲ್ಲಿ ಗೆಲುವು ಪಡೆಯಿತು.
ಟ್ರೆಂಟ್ ರಾಕೆಟ್ಸ್ ಪರ ಮಿಚೆಲ್ ಸ್ಯಾಂಟ್ನರ್ ಅಜೇಯ 35 ರನ್ ಗಳಿಸಿದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.