
ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ 26 ವರ್ಷದ ದರ್ಶನ್ ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಯಡಿಯೂರು ನಿವಾಸಿಯಾಗಿದ್ದ ದರ್ಶನ್ ಅವರು ಆಗಸ್ಟ್ 20ರಂದು ಬೆಳಗಿನ ಜಾವ 4:30ರ ಸುಮಾರಿಗೆ ನೆಲಮಂಗಲದ ಡೈರಿಗೆ ಹಾಲು ಹಾಕಿ ವಾಪಸ್ ಬರುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.
ಲಾರಿ ಚಾಲಕನ ನಿರ್ಲಕ್ಷ್ಯದ ಪಾರ್ಕಿಂಗ್ ಅಪಘಾತಕ್ಕೆ ಕಾರಣವಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ನೆಲಮಂಗಲ ಶವಾಗಾರಕ್ಕೆ ರವಾನಿಸಿದ್ದಾರೆ.