
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಪ್ರಕ್ರಿಯೆಗಳನ್ನು ಚರ್ಚಿಸಲು ಆಗಸ್ಟ್ 6ರಂದು ಉಚಿತ ಬಸ್ ಪಾಸ್ ಕಮಿಟಿಯ ಸಭೆ ನಡೆಯಲಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸಲ್ಲಿಸಿದ್ದ ಮನವಿಗೆ ಸರ್ಕಾರ ಸ್ಪಂದಿಸಿದ್ದು, ಸಭೆಯಲ್ಲಿ ಅರ್ಹ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ ಬಗ್ಗೆ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.
ಈ ಯೋಜನೆಯು ಗ್ರಾಮೀಣ ಭಾಗದಲ್ಲಿ ನಿತ್ಯ ಸಂಚರಿಸಿ ಸುದ್ದಿ ಸಂಗ್ರಹಿಸುವ ಪತ್ರಕರ್ತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಹಕಾರಿಯಾಗಲಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.