Health & Environment
ಮಡಿಕೇರಿ-ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ: ಮೂವರು ಸಾವು

ಮಡಿಕೇರಿ-ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ: ಮೂವರು ಸಾವು

tv9kannada1h
THE BRIEF
1

ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ಪಿಕ್ಅಪ್ ಜೀಪ್, ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

2

ಬೈಕ್ ಚಾಲಕ ಕುಮಾರ್, ಕಾರು ಚಾಲಕ ರತನ್ ಹಾಗೂ ಸಹ ಪ್ರಯಾಣಿಕ ಆದರ್ಶ್ ಮೃತರು ಎಂದು ಗುರುತಿಸಲಾಗಿದ್ದು, ಈ ಘಟನೆಯಲ್ಲಿ ಒಟ್ಟು 7 ಮಂದಿಗೆ ಗಾಯಗಳಾಗಿವೆ.

3

ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.