
ಕೇಂದ್ರ ಲೋಕಸೇವಾ ಆಯೋಗವು (UPSC) ವಿವಿಧ ಇಲಾಖೆಗಳು ಹಾಗೂ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು 213 ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.
ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 12 ರಿಂದ ಅಕ್ಟೋಬರ್ 2 ರವರೆಗೆ upsc.gov.in ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳ ಆಯ್ಕೆಯು ಪ್ರಾಥಮಿಕವಾಗಿ ನೇರ ಸಂದರ್ಶನದ ಮೂಲಕ ನಡೆಯಲಿದ್ದು, ಸಾಮಾನ್ಯ ಅಭ್ಯರ್ಥಿಗಳಿಗೆ 25 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.