
26 ವರ್ಷದ ಎಡಗೈ ವೇಗಿ ಅರ್ಜುನ್ ತೆಂಡೂಲ್ಕರ್ ಅವರು ಮುಂಬರುವ ದೇಶೀಯ ಕ್ರಿಕೆಟ್ ಆವೃತ್ತಿಯಲ್ಲಿ ಗೋವಾ ತಂಡವನ್ನೇ ಪ್ರತಿನಿಧಿಸಲಿದ್ದಾರೆ ಎಂದು ಗೋವಾ ಕ್ರಿಕೆಟ್ ಸಂಸ್ಥೆಯ ಮೂಲಗಳು ದೃಢಪಡಿಸಿವೆ.
ಅರ್ಜುನ್ ತೆಂಡೂಲ್ಕರ್ ಅವರು ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 50 ವಿಕೆಟ್ಗಳನ್ನು ಪಡೆದಿದ್ದು, ರಣಜಿ ಟ್ರೋಫಿಯಲ್ಲಿ ರಾಜಸ್ಥಾನ ವಿರುದ್ಧ ಶತಕ ಸಿಡಿಸಿ ತಂಡದ ಪ್ರಮುಖ ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ.
2026ರ ಐಪಿಎಲ್ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಆಡಿದ್ದ ಅರ್ಜುನ್, 36 ರನ್ ನೀಡಿ 1 ವಿಕೆಟ್ ಪಡೆದು ಉತ್ತಮ ಪ್ರದರ್ಶನ ನೀಡಿದ್ದರು.