
ಹಾಸನದಲ್ಲಿ ಪ್ರಸಿದ್ಧ ಹಾಸನಾಂಬ ದೇವಿಯ ದರ್ಶನೋತ್ಸವದ ಸಿದ್ಧತೆಗಳು ಭರದಿಂದ ಸಾಗಿದ್ದು, ಪುರಾತನ ಸಂಪ್ರದಾಯದಂತೆ ವರ್ಷಕ್ಕೊಮ್ಮೆ ತೆರೆಯುವ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಾಗಿದೆ.
ಬಾಳೆಕಂಬವನ್ನು ಕಡಿದ ಬಳಿಕ ಗರ್ಭಗುಡಿಯ ಬಾಗಿಲು ತೆರೆಯಲಾಗಿದ್ದು, ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಗರುಡ ದರ್ಶನದೊಂದಿಗೆ ದೇವಾಲಯದ ವಾರ್ಷಿಕ ಆಚರಣೆಗಳಿಗೆ ಮತ್ತಷ್ಟು ಮಹತ್ವ ದೊರೆತಿದ್ದು, ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ.