
ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಖಂಡಿಸಿದ್ದಾರೆ.
1970ರಿಂದ ಇಂತಹ ಪ್ರಕರಣಗಳನ್ನು ನ್ಯಾಯಾಲಯಗಳು ರದ್ದುಗೊಳಿಸಿವೆ ಎಂದು ಹೇಳಿರುವ ಜೋಷಿ, ಇದು ಸರ್ಕಾರದ ದ್ವೇಷಪೂರಿತ ಮತ್ತು ಹೇಡಿತನದ ಕ್ರಮ ಎಂದು ಟೀಕಿಸಿದ್ದಾರೆ.
ಸರ್ಕಾರ ಕೂಡಲೇ ಶಿಕ್ಷಕರ ಮೇಲಿನ ಅಮಾನತು ಆದೇಶವನ್ನು ಹಿಂಪಡೆಯಬೇಕೆಂದು ಕೇಂದ್ರ ಸಚಿವರು ಆಗ್ರಹಿಸಿದ್ದಾರೆ.