
ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ 2 ಚರಣಗಳನ್ನು ಮಾತ್ರ ಹಾಡಲು ಸಿಡಬ್ಲ್ಯೂಸಿ ತೆಗೆದುಕೊಂಡ ನಿರ್ಧಾರವನ್ನು ಬಿಜೆಪಿ ಬಲವಾಗಿ ಖಂಡಿಸಿದೆ.
ಆರು ಚರಣಗಳನ್ನು ಒಳಗೊಂಡ ಸಂಪೂರ್ಣ ರಾಷ್ಟ್ರೀಯ ಗೀತೆಯನ್ನು ಗೌರವಿಸಲು ಬಿಜೆಪಿ ವಿಶೇಷ ನಿರ್ಣಯ ಅಂಗೀಕರಿಸಿದ್ದು, ದೇಶವ್ಯಾಪಿ ಜಾಗೃತಿ ಅಭಿಯಾನ ನಡೆಸುವುದಾಗಿ ಘೋಷಿಸಿದೆ.
ವಂದೇ ಮಾತರಂ ಗೀತೆಯನ್ನು ವೋಟ್ ಬ್ಯಾಂಕ್ ರಾಜಕಾರಣಕ್ಕೆ ಬಲಿ ನೀಡಲಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಈ ಕುರಿತು ಯುವ ಪೀಳಿಗೆಗೆ ಅರಿವು ಮೂಡಿಸಲು ಮುಂದಾಗಿದೆ.