
ರಾಜ್ಯದ 32 ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 13,227ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಉಳಿದಿದ್ದು, ಶೇ.64ರಷ್ಟು ಬೋಧಕ ಹುದ್ದೆಗಳು ಭರ್ತಿಯಾಗದೆ ಇರುವುದರಿಂದ ಶೈಕ್ಷಣಿಕ ಗುಣಮಟ್ಟಕ್ಕೆ ತೀವ್ರ ಹಿನ್ನಡೆಯಾಗಿದೆ.
ಸಿಬ್ಬಂದಿ ಕೊರತೆಯಿಂದಾಗಿ ಹಲವು ವಿಭಾಗಗಳಲ್ಲಿ ನಿಯಮಿತ ಬೋಧನೆಗೆ ಅಡ್ಡಿಯಾಗಿದ್ದು, ಪಿಎಚ್ಡಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸಂಶೋಧನಾ ಮಾರ್ಗದರ್ಶನ ನೀಡಲು ಪ್ರಾಧ್ಯಾಪಕರ ಕೊರತೆ ಎದುರಾಗಿದೆ.
ಉನ್ನತ ಶಿಕ್ಷಣ ಇಲಾಖೆಯು ಕಳೆದ 20 ದಿನಗಳಿಂದ ಸಭೆ ನಡೆಸಿ, ಎಲ್ಲಾ ವಿಶ್ವವಿದ್ಯಾಲಯಗಳಿಂದ ವಿಶೇಷ ವರದಿ ಪಡೆಯುವ ಪ್ರಕ್ರಿಯೆ ಆರಂಭಿಸಿದ್ದು, ನವೆಂಬರ್ 15ರೊಳಗೆ ಸಂಪೂರ್ಣ ವರದಿ ಸಿದ್ಧಪಡಿಸಲು ಗುರಿ ಹಾಕಿಕೊಂಡಿದೆ.