
ಅಕ್ಟೋಬರ್ 5ರ ಸೋಮವಾರ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದ್ದು, 24 ಕ್ಯಾರೆಟ್ ಚಿನ್ನವು 10 ಗ್ರಾಂಗೆ 3,500 ರೂಪಾಯಿ ಕಡಿಮೆಯಾಗಿದೆ.
ಯುಎಸ್ ಫೆಡರಲ್ ರಿಸರ್ವ್ನ ಮುಂಬರುವ ಹಣಕಾಸು ನೀತಿ ಸಭೆಯ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿನ ಅನಿಶ್ಚಿತತೆಯಿಂದಾಗಿ ಹೂಡಿಕೆದಾರರು ಪ್ರಾಫಿಟ್ ಬುಕಿಂಗ್ಗೆ ಮುಂದಾಗಿರುವುದು ಈ ಬೆಲೆ ಕುಸಿತಕ್ಕೆ ಕಾರಣವಾಗಿದೆ.
ಅಕ್ಟೋಬರ್ 5ರಂದು ಭಾರತದಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ಸುಮಾರು ₹1,50,570 ರಷ್ಟಿದ್ದರೆ, ಬೆಳ್ಳಿ ಬೆಲೆ ಪ್ರತಿ ಕೆಜಿಗೆ ₹2,26,630 ರಷ್ಟಿದೆ.