
ಯುಜಿ ನೀಟ್ 2026ರ ಎರಡನೇ ಸುತ್ತಿನ ಸೀಟು ಹಂಚಿಕೆಗೆ ಹೆಚ್ಚುವರಿಯಾಗಿ 150 ವೈದ್ಯಕೀಯ ಸೀಟುಗಳು ಲಭ್ಯವಿದ್ದು, ಅಭ್ಯರ್ಥಿಗಳು ಸೆಪ್ಟೆಂಬರ್ 9ರ ಮಧ್ಯಾಹ್ನ 2 ಗಂಟೆಯವರೆಗೆ ಆಪ್ಷನ್ಸ್ ದಾಖಲಿಸಬಹುದು.
ಬಾಗಲಕೋಟೆಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ 100 ಸೀಟು ಹಾಗೂ ಫಾರೂಕಿಯ ವೈದ್ಯಕೀಯ ಕಾಲೇಜಿಗೆ 50 ಸೀಟುಗಳನ್ನು ಹೆಚ್ಚುವರಿಯಾಗಿ ಸೇರ್ಪಡೆ ಮಾಡಲಾಗಿದೆ ಎಂದು ಕೆಇಎ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಮೊದಲ ಸುತ್ತಿನಲ್ಲಿ ಸೀಟು ಸಿಗದವರು ಅಥವಾ ಚಾಯ್ಸ್ 2 ಮತ್ತು 3 ಆಯ್ಕೆ ಮಾಡಿದವರು ಈ ಸುತ್ತಿನಲ್ಲಿ ಭಾಗವಹಿಸಲು ಅವಕಾಶವಿದ್ದು, ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಪರಿಶೀಲಿಸಲು ಸೂಚಿಸಲಾಗಿದೆ.