
ಬೆಂಗಳೂರಿನ 10 ಕಡೆಗಳಲ್ಲಿ ಕಳಪೆ ಗುಣಮಟ್ಟದ ಸೌಂದರ್ಯವರ್ಧಕಗಳನ್ನು ಮಾರಾಟ ಮಾಡುತ್ತಿದ್ದ ಮಳಿಗೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಲಿಪ್‌ಸ್ಟಿಕ್, ಸೆರಮ್, ಪೌಡರ್ ಮತ್ತು ವಿವಿಧ ಕ್ರೀಮ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಪರೀಕ್ಷಾ ವರದಿಯಲ್ಲಿ ಉತ್ಪನ್ನಗಳು ಅಸುರಕ್ಷಿತ ಎಂದು ಕಂಡುಬಂದರೆ ಸಂಬಂಧಪಟ್ಟ ಮಳಿಗೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.