
ರಾಜಸ್ಥಾನದ ಅಳ್ವಾರ್ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾಂಶುಪಾಲ ಲಾಲ್ ಚಂದ್ ಮೀನಾ, ವಿದ್ಯಾರ್ಥಿನಿಯರೊಂದಿಗೆ ಡ್ಯಾಂನಲ್ಲಿ ಸ್ನಾನ ಮಾಡುತ್ತಿದ್ದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದಾರೆ.
ಶಾಲಾ ಸಮವಸ್ತ್ರದಲ್ಲಿದ್ದ ವಿದ್ಯಾರ್ಥಿನಿಯರೊಂದಿಗೆ ಪ್ರಾಂಶುಪಾಲರು ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಶಿಕ್ಷಣ ನಿರ್ದೇಶನಾಲಯವು ಪ್ರಾಥಮಿಕ ತನಿಖೆಯ ನಂತರ ಆರೋಪಿಯನ್ನು ಸೇವೆಯಿಂದ ಅಮಾನತುಗೊಳಿಸಿ, ಘಟನೆಯ ಕುರಿತು ಇಲಾಖಾ ಮಟ್ಟದ ಸಮಗ್ರ ತನಿಖೆಗೆ ಆದೇಶ ಹೊರಡಿಸಿದೆ.