
ರಷ್ಯಾ-ಉಕ್ರೇನ್ ನಡುವಿನ ಯುದ್ಧ ಐದನೇ ವರ್ಷಕ್ಕೆ ಕಾಲಿಟ್ಟಿದ್ದು, ಸಂಘರ್ಷವನ್ನು ಕೊನೆಗೊಳಿಸಲು ಭಾರತವು ಯಾವುದೇ ರೀತಿಯ ನೆರವು ನೀಡಲು ಸಿದ್ಧವಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೀವ್ನಲ್ಲಿ ತಿಳಿಸಿದ್ದಾರೆ.
ಕೀವ್ನಲ್ಲಿ ಉಕ್ರೇನ್ ವಿದೇಶಾಂಗ ಸಚಿವ ಆ್ಯಂಡ್ರಿ ಸಿಬಿಹಾ ಅವರೊಂದಿಗೆ ಮಾತುಕತೆ ನಡೆಸಿದ ಜೈಶಂಕರ್, ಭಾರತವು ಇದುವರೆಗೆ 19 ಬಾರಿ ಮಾನವೀಯ ನೆರವಿನ ಸಾಮಗ್ರಿಗಳನ್ನು ಉಕ್ರೇನ್ಗೆ ಪೂರೈಸಿರುವುದಾಗಿ ಮಾಹಿತಿ ನೀಡಿದ್ದಾರೆ.
ರಣರಂಗದಿಂದ ಪರಿಹಾರ ಸಿಗುವುದಿಲ್ಲ ಎಂಬ ನಿಲುವನ್ನು ಪುನರುಚ್ಚರಿಸಿದ ಜೈಶಂಕರ್, ಪ್ರಧಾನಿ ಮೋದಿ ಅವರು ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಯುದ್ಧ ನಿಲ್ಲಿಸುವಂತೆ ಚರ್ಚಿಸಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಿದ್ದಾರೆ.