
ಇರಾನ್ ವಿರುದ್ಧ ಎರಡನೇ ಮಹಾಯುದ್ಧದ ನಂತರದ ಅತಿದೊಡ್ಡ ದಾಳಿಗೆ ಅಮೆರಿಕ ಸಜ್ಜಾಗಿತ್ತು, ಆದರೆ ಜನರ ಪ್ರಾಣಹಾನಿ ತಪ್ಪಿಸಲು ಒಪ್ಪಂದಕ್ಕೆ ಆದ್ಯತೆ ನೀಡಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ.
ವೆನೆಜುವೆಲಾದಲ್ಲಿ ಅನುಸರಿಸಿದ ಮಿಲಿಟರಿ ಕಾರ್ಯಾಚರಣೆಯ ಮಾದರಿಯನ್ನೇ ಇರಾನ್ ವಿಚಾರದಲ್ಲೂ ಮುಂದುವರಿಸಲಾಗುವುದು ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಇರಾನ್ ಅಣ್ವಸ್ತ್ರ ಹೊಂದುವುದನ್ನು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಟ್ರಂಪ್, ಹೋರ್ಮುಜ್ ಜಲಸಂಧಿ ತೆರೆಯದಿದ್ದರೆ ತೀವ್ರ ದಾಳಿ ನಡೆಸುವುದಾಗಿ ಎಚ್ಚರಿಸಿದ್ದಾರೆ.