
ತಮ್ಮ ತಂದೆ ಹೆಸರು ಕೆಡಿಸಲು ಸ್ವಪಕ್ಷದವರೇ ಸ್ಟಿಂಗ್ ಆಪರೇಷನ್ ಮಾಡಿಸಿದ್ದಾರೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಆರೋಪ ಮಾಡಿದ್ದರು.
ಒಬ್ಬ ಪತ್ರಕರ್ತ ಮತ್ತು ಮಂಗಳೂರಿನ ಕೃಪಾ ಆಳ್ವಾ ಸೇರಿಕೊಂಡು ಈ ಸ್ಟಿಂಗ್ ಆಪರೇಷನ್ ಮಾಡಿದ್ದು, ಇದು ತನ್ನನ್ನು ಬ್ಲ್ಯಾಕ್ಮೇಲ್ ಮಾಡಲು ನಡೆಸಿರುವ ಷಡ್ಯಂತ್ರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಜನರಿಗೆ ಸತ್ಯಾಂಶ ತಿಳಿಯಲು ತಾನೇ ಸ್ವಯಂಪ್ರೇರಿತವಾಗಿ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿರುವ ಸಿದ್ದರಾಮಯ್ಯ, ಸರ್ಕಾರದ ತನಿಖೆ ಮೇಲೆ ತಮಗೆ ಪೂರ್ಣ ನಂಬಿಕೆಯಿದೆ ಎಂದಿದ್ದಾರೆ.