
ಮುಂಬೈನ ಜುಹುವಿನಲ್ಲಿ ಫುಟ್‌ಬಾಲ್ ಆಟ ಮುಗಿಸಿ ವಾಪಸ್ಸಾಗುತ್ತಿದ್ದ ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಈ ಅನಿರೀಕ್ಷಿತ ದಾಳಿಯಲ್ಲಿ ಟೈಗರ್ ಶ್ರಾಫ್ ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಚಾಲಕ ಹಾಗೂ ಆಟೋರಿಕ್ಷಾ ಚಾಲಕ ಗಾಯಗೊಂಡು ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕೃತ್ಯದ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಆಪ್ತರಾದ ಅನಿಲ್ ಪಂಡಿತ್ ಹಾಗೂ ಹರ್ಮನ್ ಸಂಧು ಹೊತ್ತುಕೊಂಡಿದ್ದು, ಮುಂಬೈ ಅಪರಾಧ ವಿಭಾಗದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.