
ಭಾರತ ಮತ್ತು ಐರೋಪ್ಯ ಒಕ್ಕೂಟದ (ಇಯು) ನಡುವೆ ಹೂಡಿಕೆ ಸಂರಕ್ಷಣಾ ಒಪ್ಪಂದ (ಐಪಿಎ) ಕುರಿತ ಮಾತುಕತೆಗಳು ಪ್ರಗತಿಯಲ್ಲಿವೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ತಿಳಿಸಿದ್ದಾರೆ.
ಭೌಗೋಳಿಕ ಸೂಚಕಗಳ (ಜಿಐ) ಕುರಿತ ಒಪ್ಪಂದಕ್ಕೆ ಅಗತ್ಯವಿರುವ ಕೆಲವು ಕಾನೂನು ಬದಲಾವಣೆಗಳನ್ನು ಸಂಸತ್ತಿನಲ್ಲಿ ಮಂಡಿಸಲು ಸಚಿವಾಲಯ ಸಿದ್ಧತೆ ನಡೆಸುತ್ತಿದೆ.
ಜನವರಿ 27ರಂದು ಭಾರತ ಮತ್ತು ಇಯು ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಮಾತುಕತೆಗಳು ಪೂರ್ಣಗೊಂಡಿವೆ ಎಂದು ಘೋಷಿಸಲಾಗಿತ್ತು.