
ಪೊಲೀಸ್ ತಪಾಸಣೆಯಿಂದ ತಪ್ಪಿಸಿಕೊಳ್ಳಲು ಕಾರಿನ ಮೇಲೆ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಫೋಟೋ ಅಂಟಿಸಿಕೊಂಡು ಒಡಿಶಾದಿಂದ ಕೇರಳಕ್ಕೆ ಗಾಂಜಾ ಸಾಗಿಸುತ್ತಿದ್ದ ಜಾಲವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ.
ಕುಂಬಳಗೋಡು ಠಾಣೆಯ ಪೊಲೀಸರು ಕಾರನ್ನು ಅಡ್ಡಗಟ್ಟು ಪರಿಶೀಲಿಸಿದಾಗ ಸೀಟ್‌ಗಳ ಅಡಿಯಲ್ಲಿ ಬಚ್ಚಿಟ್ಟಿದ್ದ ಒಟ್ಟು 317 ಕೆಜಿ ಗಾಂಜಾ ಪತ್ತೆಯಾಗಿದ್ದು, ಇದರ ಮೌಲ್ಯ 1.5 ರಿಂದ 1.70 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.
ಈ ಕೃತ್ಯಕ್ಕೆ ಸಂಬಂಧಿಸಿದಂತೆ ವಿಷ್ಣುಮಣಿ ಮತ್ತು ಚಾನ್ ಪಾಷಾ ಎಂಬ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆ ಮುಂದುವರೆಸಿದ್ದಾರೆ.