
ಚಾಮರಾಜನಗರದ ಹನೂರು ತಾಲೂಕಿನ ಕೋಣನಕೆರೆ ಗ್ರಾಮದ ಬಳಿ ಭಾನುವಾರ ನಡೆದ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಮಾರ್ಟಳ್ಳಿ ಗ್ರಾಮದ ಯುವರಾಜ್ (50) ಮತ್ತು ಮದ್ದೂರಿನ ಶಶಾಂಕ್ (25) ಎಂದು ಗುರುತಿಸಲಾಗಿದ್ದು, ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.
ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತವೆಸಗಿದ ವಾಹನ ಮತ್ತು ಚಾಲಕನ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.