International
ವಾರಾಣಸಿ ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ: ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

ವಾರಾಣಸಿ ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ: ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

prajavani1h
THE BRIEF
1

ವಾರಾಣಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಪಿಸ್ತೂಲಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

2

ಮುಂಬೈಗೆ ಪ್ರಯಾಣಿಸಲು ಬಂದಿದ್ದ ಕಮಲೇಶ್ ಕೇದರನಾಥ ರೈ ಎಂಬ ಪ್ರಯಾಣಿಕನನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

3

ಭದ್ರತಾ ತಪಾಸಣೆ ನಡೆಸುತ್ತಿದ್ದಾಗ ಪಿಸ್ತೂಲಿನ ಮಾಹಿತಿಯನ್ನು ದಾಖಲಿಸಿಕೊಳ್ಳುವ ವೇಳೆ ಈ ಘಟನೆ ನಡೆದಿದ್ದು, ಸಿಬ್ಬಂದಿಯ ಕಾಲು ಮತ್ತು ಹೆಬ್ಬೆರಳಿಗೆ ಗಾಯವಾಗಿದೆ.