
ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವರು ಭಾರತದ ಸಾರ್ವಕಾಲಿಕ ಟೆಸ್ಟ್ ತಂಡವನ್ನು ಪ್ರಕಟಿಸಿದ್ದು, ಇದರಲ್ಲಿ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಇಬ್ಬರಿಗೂ ಸ್ಥಾನ ನೀಡಿದ್ದಾರೆ.
ತಂಡದಲ್ಲಿ ಆರಂಭಿಕರಾಗಿ ವಿರೇಂದ್ರ ಸೆಹ್ವಾಗ್ ಮತ್ತು ಕೆ.ಎಲ್. ರಾಹುಲ್ ಅವರನ್ನು ಆಯ್ಕೆ ಮಾಡಲಾಗಿದ್ದು, ವಿಕೆಟ್ ಕೀಪರ್ ಆಗಿ ಎಂ.ಎಸ್. ಧೋನಿ ಸ್ಥಾನ ಪಡೆದಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ರವಿಚಂದ್ರನ್ ಅಶ್ವಿನ್, ಅನಿಲ್ ಕುಂಬ್ಳೆ, ಜಸ್ಪ್ರೀತ್ ಬುಮ್ರಾ ಮತ್ತು ಜಹೀರ್ ಖಾನ್ ಅವರನ್ನು ಉತ್ತಪ್ಪ ತಮ್ಮ ತಂಡದಲ್ಲಿ ಸೇರಿಸಿಕೊಂಡಿದ್ದಾರೆ.